ಕೂಡಿಗೆ, ಆ. 16 : ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ರಹಿತ ಕುಟುಂಬಗಳಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟೌವ್‍ಗಳನ್ನು ವಿತರಿಸಲಾಯಿತು.
ಈ ಹಿಂದೆ 60 ಕ್ಕೂ ಹೆಚ್ಚು ಕುಟುಂಬಗಳಿಗೆ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್‍ಗಳನ್ನು ವಿತರಿಸಲಾಗಿದ್ದು, ಇಂದು 5 ಕುಟುಂಬಗಳಿಗೆ ವಿತರಿಸಲಾಗಿದೆ. ಬಾಕಿ ಇರುವ ಫಲಾನುಭವಿಗಳಿಗೆ ಸದ್ಯದಲ್ಲೇ ವಿತರಿಸಲಾಗುವದು ಎಂದು ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಭಾಸ್ಕರ್ ನಾಯಕ್ ತಿಳಿಸಿದರು.