ವೀರಾಜಪೇಟೆ, ಆ. 18: ವೀರಾಜಪೇಟೆ ನಗರ ಮತ್ತು ತಾಲೂಕು ಭಜರಂಗದಳ ಸಂಘಟನೆಯ ಆಶ್ರಯದಲ್ಲಿ ಕೃಷ್ಣ ಜನ್ಮಾಷ್ಟಮಿ ಮತ್ತು ವಿಶ್ವ ಹಿಂದೂ ಪರಿಷತ್ ಸಂಸ್ಥಾಪನಾ ದಿನಚರಣೆಯ ಕಾರ್ಯಕ್ರಮವು ತಾ. 24 ರಂದು ನಗರದಲ್ಲಿ ಆಯೋಜಿಸಲಾಗಿತ್ತು. ಜಳಪ್ರಳಯದಲ್ಲಿ ಪ್ರಾಣ ಹಾನಿ ಸೇರಿದಂತೆ ಅಪಾರ ನಷ್ಟ ಸಂಭವಿಸಿ ಸಂಕಷ್ಟವನ್ನು ಎದುರಿಸುತ್ತಿರುವದರಿಂದ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ತಾ. 23 ರಂದು ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಶ್ರೀ ಬಾಲ ಆಂಜನೆಯ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಸರಳ ರೀತಿಯಲ್ಲಿ ಆಚರಿಸುವಂತೆ ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.