*ಗೋಣಿಕೊಪ್ಪಲು: ಸಹೋದರತೆಯನ್ನು ಸಾರುವ ಸಾಂಪ್ರಾದಾಯಿಕ ಆಚರಣೆಯಾದ ರಕ್ಷಾಬಂಧನವನ್ನು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವತಿಯಿಂದ ಇಲ್ಲಿನ ಉಮಾಮಹೇಶ್ವರಿ ದೇವಸ್ಥಾನದ ಆವರಣ, ಆಟೋ ಚಾಲಕ ಸಂಘ ಮತ್ತು ವಾಹನ ಚಾಲಕರ ಸಂಘದ ಕಚೇರಿಯಲ್ಲಿ ನಡೆಸಲಾಯಿತು.

ಸಂಘದ ಸ್ವಯಂ ಸೇವಕರು ಹಾಗೂ ಸಾರ್ವಜನಿಕರು ತಮ್ಮ ಸ್ನೇಹಿತರಿಗೆ, ಸಹೋದರರಿಗೆ ಕೈಗೆ ರಕ್ಷೆ ಕಟ್ಟುವ ಮೂಲಕ ರಕ್ಷಾಬಂಧನ ಕಾರ್ಯಕ್ರಮವನ್ನು ಸಂಭ್ರಮಿಸಿದರು. ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ, ಗ್ರಾ.ಪಂ. ಅಧ್ಯಕ್ಷೆ ಸೆಲ್ವಿ, ಸದಸ್ಯರುಗಳಾದ ರತಿ ಅಚ್ಚಪ್ಪ, ಮಮತ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘಟಕ ಮುರುಗ, ಕಾಯರ ಕಿರಣ್, ಪ್ರಮುಖರಾದ ಗಣೇಶ್ ರೈ, ಸುರೇಶ್ ರೈ, ವಾಹನ ಚಾಲಕ ಸಂಘದ ಉಪಾಧ್ಯಕ್ಷ ಶರತ್ ಕಾಂತ್, ಆಟೋ ಚಾಲಕ ಸಂಘದ ಅಧ್ಯಕ್ಷ ಜಪ್ಪು ಸುಬ್ಬಯ್ಯ, ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

ತಿತಿಮತಿ, ದೇವರಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಹೋದರತೆಯ ಸಂಕೇತವಾದ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಿದರು. ಗ್ರಾ.ಪಂ. ಸದಸ್ಯ ಅನೂಪ್, ಪ್ರಮುಖರಾದ ರಂಜಿತ್, ಶಿವು, ಮನು ನಂಜಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವೀರಾಜಪೇಟೆ: ವೀರಾಜಪೇಟೆಯ ಆರ್ಜಿ ಗ್ರಾಮದಲ್ಲಿ ಪುಟಾಣಿ ಸಹೋದರ - ಸಹೋದರಿಯರು ಪರಸ್ಪರ ರಕ್ಷೆ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಿಸಿದರು.ಪೆರಾಜೆ: ರಕ್ಷಾ ಬಂಧನ ಕಾರ್ಯಕ್ರಮವು ಪೆರಾಜೆಯ ಕುಂಬಳಚೇರಿ ವೈನಾಟ್ ಕುಲವನ್ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಕುಂದ ಮಾತನಾಡಿದರು. ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವೈನಾಟ್ ಕುಲವನ್ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪದ್ಮಯ್ಯ ಸೇರಿದಂತೆ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವರದಿ: ಕಿರಣ್

ಕೂಡಿಗೆ: ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ. ಸ್ವಾಮಿ ದೇವಾಲಯದ ಆವರಣದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಈ ಸಂದÀರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಸೇರಿದಂತೆ ಆರ್.ಎಸ್.ಎಸ್. ವಿವಿಧ ಘಟಕಗಳ ಪ್ರಮುಖರು ಭಾಗವಹಿಸಿದ್ದರು.