ಮಡಿಕೇರಿ, ಆ. 18: ಲಯನ್ಸ್ ಕ್ಲಬ್ ಮತ್ತು ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ವನಮಹೋತ್ಸವ ಆಚರಿಸಲಾಯಿತು.
ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ಕಿಶೋರ್ ಪಿ.ಬಿ. ಮತ್ತು ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಎಮ್. ಎಸ್. ಭಟ್ ಬಾದಾಮಿ ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಹಣ್ಣಿನ ಗಿಡ ಮತ್ತು ಇತರ ಸಸಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಮಂಡಳಿಯ ಸದಸ್ಯರು, ಲಯನ್ಸ್ ಕ್ಲಬ್ಬಿನ ಸದಸ್ಯರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.