ಸೋಮವಾರಪೇಟೆ, ಆ. 18: ತಾಲೂಕಿನ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಶ್ರಯ ಕಾಲೋನಿ ಅಂಗನವಾಡಿಯಲ್ಲಿ ಆರೋಗ್ಯವಂತ ಶಿಶುಗಳ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಸದಸ್ಯ ಎಂ.ಎ. ಮಜೀದ್ ವಹಿಸಿ ಮಾತನಾಡಿ, ಪ್ರತಿಯೋರ್ವರೂ ತಮ್ಮ ಮನೆ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಚುಚ್ಚುಮದ್ದು ಆಂದೋಲನದ ಬಗ್ಗೆ ಮಾಹಿತಿ ನೀಡಲಾಯಿತು. ಆರೋಗ್ಯವಂತ ಮಕ್ಕಳನ್ನು ಗುರುತಿಸಿ ಬಹುಮಾನ ವಿತರಿಸಲಾಯಿತು.

ಈ ಸಂದರ್ಭ ಗ್ರಾ.ಪಂ. ಸದಸ್ಯರುಗಳಾದ ಶಾಂತ, ಪ್ರೇಮ ಬಾಲಕೃಷ್ಣ, ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಪಿ.ಸಿ. ಕುಸುಮ, ಆರೋಗ್ಯ ಸಹಾಯಕಿ ಸುಶೀಲ, ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ, ಆಶಾ ಕಾರ್ಯಕರ್ತೆಯರಾದ ಲೀಲಾ, ಸಂಧ್ಯಾ ಸೇರಿದಂತೆ ಇತರರು ಉಪಸ್ಥಿತರಿದ್ದರು.