ಸೋಮವಾರಪೇಟೆ,ಆ.18: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೃಷ್ಣಜನ್ಮಾಷ್ಟಮಿ ಹಬ್ಬದ ಅಂಗವಾಗಿ ತಾ. 24ರಂದು ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಆರು ವರ್ಷ ಒಳಗಿನ ಮಕ್ಕಳಿಗೆ ಶ್ರೀ ಕೃಷ್ಣನ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ತಾ. 24ರಂದು ಮಧ್ಯಾಹ್ನ 3.30ಕ್ಕೆ ಸ್ಪರ್ಧೆ ನಡೆಯಲಿದ್ದು, ಆಸಕ್ತರು ತಾ. 23 ರ ಒಳಗೆ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ (ಮೊ:9845005453) ಇವರಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.