ಹೆಬ್ಬಾಲೆ, ಆ. 19: ಸಮೀಪದ ಹೆಬ್ಬಾಲೆ ಐಐಎನ್‍ಎಸ್ ಕಂಪ್ಯೂಟರ್ ತರಬೇತಿ ಕೇಂದ್ರದ ವತಿಯಿಂದ ವರ್ಷದ ಕಂಪ್ಯೂಟರ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ನಿವೃತ್ತ ಕೆಪಿಟಿಸಿಎಲ್ ಎಂಜಿನಿಯರ್ ಎಚ್.ಎಲ್. ರಾಮಪ್ಪ ಪ್ರಮಾಣ ಪತ್ರ ವಿತರಣೆ ಮಾಡಿದರು. ಸಂಯುಕ್ತ ಪದವಿ ಪೂರ್ವ ಕಾಲೇಜು ಹೆಬ್ಬಾಲೆ ಪ್ರಾಂಶುಪಾಲ ಎನ್.ಎನ್. ಧರ್ಮಪ್ಪ ಮಾತನಾಡಿ, ಮಾಜಿ ಸೈನಿಕ ಪುಟ್ಟೇಗೌಡ, ಐಐಎನ್‍ಎಸ್ ಕಂಪ್ಯೂಟರ್ ತರಬೇತಿ ಕೇಂದ್ರದ ನಿರ್ದೇಶಕ ಸುರೇಂದ್ರ, ಹೆಬ್ಬಾಲೆ ಕಂಪ್ಯೂಟರ್ ತರಬೇತಿ ಕೇಂದ್ರದ ಗಿರೀಶ್ ಉಪಸ್ಥಿತರಿದ್ದರು.