ಮಡಿಕೇರಿ ಆ. 19 : ಕೊಡಗು ಜಿಲ್ಲಾ ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗುಡುಗಳಲೇ ನಿವಾಸಿ ನಿವೃತ್ತ ಶಿಕ್ಷಕ ಡಿ. ಬಿ. ಸೋಮಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಸಂಘದ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯೊಂದಿಗೆ ಸೋಮಪ್ಪ ಪದಗ್ರಹಣ ಸುಲಭವಾಯಿತು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಖಜಾಂಚಿಯಾಗಿ ಹಾಗೂ ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಸೋಮಪ್ಪ ಸೇವೆ ಸಲ್ಲಿಸುತ್ತಿದ್ದಾರೆ.