ಮಡಿಕೇರಿ, ಆ. 19: ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮ ಪಂಚಾಯಿತಿ ಹಾಗೂ ವೀರಾಜಪೇಟೆ ತಾಲೂಕಿನ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಿಇಜಿ ನಿರ್ದೇಶನಾಲಯ ಮತ್ತು ಜಿಲ್ಲಾಡಳಿತ ಸಹಯೋಗದಲ್ಲಿ ಹೊಸ ಆಧಾರ್ ನೋಂದಣಿ ಹಾಗೂ ಆಧಾರ್ ತಿದ್ದುಪಡಿಗಾಗಿ ತಾ.24 ರವರೆಗೆ ಆಧಾರ್ ಶಿಬಿರ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.