ಕುಶಾಲನಗರ, ಆ. 19: ಬೆಂಗಳೂರು ಸಮರ್ಥ ಸಾಹಿತ್ಯ ಮತ್ತು ಸಾಂಸ್ಕøತಿಕ ಪ್ರತಿಷ್ಠಾನ ವತಿಯಿಂದ ಕುಶಾಲನಗರ ವಕೀಲರು ಹಾಗೂ ಸಮಾಜ ಸೇವಕರಾದ ಆರ್.ಕೆ. ನಾಗೇಂದ್ರ ಅವರಿಗೆ ಕೆಂಗಲ್ ಹನುಮಂತಯ್ಯ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಕೃಷ್ಣರಾಜ ಪರಿಷನ್ಮಂದಿರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಿತು.