ಮಡಿಕೇರಿ, ಆ. 20: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನೂತನ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ನೇಮಕಗೊಂಡಿರುವ ಎಸ್. ಸುರೇಶ್‍ಕುಮಾರ್ ಅವರು ತಾ. 21 ರಂದು (ಇಂದು) ಜಿಲ್ಲೆಗೆ ಭೇಟಿ ನೀಡಲಿದ್ದು; ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಸಂಭವಿಸಿರುವ ಪ್ರಕೃತಿ ವಿಕೋಪದ ಬಗ್ಗೆ ಅಧ್ಯಯನ ನಡೆಸಲಿದ್ದಾರೆ.