ಮಡಿಕೇರಿ, ಆ. 20: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸೋಮವಾರ ನಡೆದ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ನಾಯಕನಾಗಿ ಅಂತಿಮ ಬಿ.ಕಾಂ. ವಿದ್ಯಾರ್ಥಿ ಪ್ರತೀಕ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿ ಸಂಘದ ಉಳಿದ ಪದಾಧಿಕಾರಿಗಳಾಗಿ ಉಪಾಧ್ಯಕ್ಷೆಯಾಗಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಮೊನಿಷ ಜಿ. ಕಾರ್ಯದರ್ಶಿಯಾಗಿ ತೃತೀಯ ಬಿಬಿಎ ವಿದ್ಯಾರ್ಥಿ ಲಿಶಾಲ್ ಬೆನ್ನಿ, ಜಂಟಿ ಕಾರ್ಯದರ್ಶಿಯಾಗಿ ದ್ವಿತೀಯ ಸಮಾಜಕಾರ್ಯ ವಿಭಾಗದ ಮಂಜುನಾಥ.ಪಿ.ಆರ್ ಮತ್ತು ದ್ವಿತೀಯ ಕೆಜೆಎಸ್ ವಿದ್ಯಾರ್ಥಿನಿ ಲೀನಾ.ಕೆ.ಎಲ್, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಅಂತಿಮ ಬಿಎ ಹೆಚ್‍ಇಪಿ ವಿದ್ಯಾರ್ಥಿ ಸಂಚಿತ್. ಟಿ.ಆರ್ ಮತ್ತು ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಜಿಶ್ಮಾ ರೆಜಿನಾ ಅವರು ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿ ಸಂಘದ ಪದಾಧಿಕಾರಿ ಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಸಿ. ಜಗತ್ ತಿಮ್ಮಯ್ಯ, ವಿದ್ಯಾರ್ಥಿ ನಾಯಕರು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿ ಶಿಸ್ತಿನಿಂದ ನಡೆದುಕೊಳ್ಳಬೇಕು, ಆ ಮೂಲಕ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ತಾವೂ ಉತ್ತಮ ಭವಿಷ್ಯ ರೂಪಿಸಿಕೊಳ್ಳು ವದರೊಂದಿಗೆ ಇತರ ವಿದ್ಯಾರ್ಥಿಗಳೂ ಉಜ್ವಲ ಬದುಕು ರೂಪಿಸಿಕೊಳ್ಳಲು ವಿದ್ಯಾರ್ಥಿ ಜೀವನವನ್ನು ಸದುಪ ಯೋಗ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ. ಈ. ತಿಪ್ಪೇಸ್ವಾಮಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತ ನಾಡುತ್ತಾ ನಮ್ಮ ದೇಶದ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆ ಬಗ್ಗೆ ವಿದ್ಯಾರ್ಥಿಗಳಲ್ಲೂ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ನಾಯಕರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತಿದೆ.
ಅಲ್ಲದೆ, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳೆಲ್ಲವನ್ನೂ ಉಪನ್ಯಾಸಕರು ಅರಿತುಕೊಳ್ಳಲು ಸಾಧ್ಯವಾಗುವದಿಲ್ಲ, ಅಂತಹ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಕಾಲೇಜಿನ ಆಡಳಿತ ವರ್ಗದ ಗಮನಕ್ಕೆ ತಂದು ಆ ಮೂಲಕ ಕಾಲೇಜಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು, ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಬೇಕು, ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಅವರೂ ಕೂಡ ಪಾಲ್ಗೊಳ್ಳಬೇಕು ಎಂಬ ದೃಷ್ಟಿಯಿಂದ ನಾವು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿದ್ದೇವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳುವದರೊಂದಿಗೆ ಮುಂದಿನ ದಿನಗಳಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲ ಸಮರ್ಥ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಭೌತಶಾಸ್ತ್ರ ವಿಭಾಗದ ಪ್ರಾದ್ಯಾಪಕರಾದ ಡಾ. ನಾಗರಾಜ್, ಸುಶೀಲ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಂಗಪ್ಪ, ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಧರ್ ಹೆಗಡೆ, ಡಾ. ಬಿ.ಹೆಚ್. ತಲವಾರ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಪೂಣಚ್ಚ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಜಗದೀಶ್, ಕಂಪ್ಯೂಟರ್ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಪ್ರಭಾವತಿ ಎಂ. ಅವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
-ವರದಿ: ಅಶ್ವಿನಿ. ಎಂ.ಎಂ ಮತ್ತು ಚರಣ್. ಜಿ. ಅಂತಿಮ ಪತ್ರಿಕೋದ್ಯಮ ವಿದ್ಯಾರ್ಥಿಗಳು