ಗೋಣಿಕೊಪ್ಪ ವರದಿ, ಆ. 20: ಕೊಡಗು ಪ್ರವಾಹದಲ್ಲಿ ಬೆಳೆ ನಷ್ಟ ಅನುಭವಿಸಿರುವ ರೈತರ ಪ್ರತೀ ಏಕರೆ ಭೂಮಿಗೆ ಕನಿಷ್ಟ 50 ಸಾವಿರ ಪರಿಹಾರ ಧನ ನೀಡಬೇಕು ಎಂದು ಡಾ. ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘದ ಜಿಲ್ಲಾಧ್ಯಕ್ಷ ಚಿಮ್ಮಂಗಡ ಗಣೇಶ್ ಒತ್ತಾಯಿಸಿದ್ದಾರೆ.

ಜಿಲ್ಲಾಡಳಿತ ರೈತರಿಗೆ ಕನಿಷ್ಟ 50 ಸಾವಿರ ಪರಿಹಾರ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ರೈತ ಸಂಘದ ಪ್ರ. ಕಾರ್ಯದರ್ಶಿ ಕಳ್ಳಿಚಂಡ ಧನು, ಸಂಚಾಲಕ ಮಚ್ಚಮಾಡ ರಂಜಿ, ಖಜಾಂಚಿ ಚಂಗುಲಂಡ ರಾಜಪ್ಪ, ಶ್ರೀಮಂಗಲ ಹೋಬಳಿ ಸಂಚಾಲಕ ಅಯ್ಯಮಾಡ ಸೋಮೇಶ್ ಉಪಸ್ಥಿತರಿದ್ದರು.