ಮಡಿಕೇರಿ, ಆ. 20: ಜಿಲ್ಲೆಯಲ್ಲಿ ತಾ. 21 ಹಾಗೂ ತಾ. 22 ರಂದು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ.

ಈಗಾಗಲೇ ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯಿಂದ ಮತ್ತು ಕೆಲವು ಪ್ರದೇಶಗಳಲ್ಲಿ ಆದ ಭೂಕುಸಿತದಿಂದ ರಸ್ತೆ ಸಂಪರ್ಕಗಳು ಕಡಿತಗೊಂಡಿರುವದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

ಪ್ರಕೃತಿ ವಿಕೋಪ ಸಂಬಂಧಿತ ಯಾವದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಈ ಪ್ರಕಟಣೆಯನ್ನು ಸಾರ್ವಜನಿಕರ ಮತ್ತು ಪ್ರವಾಸಿಗರ ಹಿತದೃಷ್ಟಿಯಿಂದ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ: 24ಘಿ7 ಕಂಟ್ರೋಲ್ ರೂಂ 08272- 221077 Whಚಿಣsಚಿಠಿಠಿ ಓo: 8550001077