ಮಡಿಕೇರಿ, ಆ. 20 : ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟ ಸಮೀಪದ ಕಾಫಿ ತೋಟವೊಂದರಲ್ಲಿ ಗರ್ಭ ಧರಿಸಿದ ಗೋವನ್ನು ಹತ್ಯೆಗೈದ ಘಟನೆಯನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್, ಬಜರಂಗದಳ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹಿಂ.ಜಾ.ವೇ ಪ್ರಧಾನ ಕಾರ್ಯದರ್ಶಿ ಕುಕ್ಕೇರ ಅಜಿತ್, ಜಿಲ್ಲಾ ಸಂಚಾಲಕ ಡಿ. ನರಸಿಂಹ, ಹಿಂದೂ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.