ಮಡಿಕೇರಿ, ಆ. 20: ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್‍ಕುಮಾರ್ ಕಟೀಲು ನೇಮಕಗೊಂಡಿದ್ದಾರೆ. ಭಾಜಪ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಳಿನ್‍ಕುಮಾರ್ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ. ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಳಿನ್‍ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.