ಆ. 22: ಕುಶಾಲನಗರ ಸಮೀಪ ಕೊಪ್ಪ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ 5 ಮೇಕೆಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಗ್ರಾಮದ ಎರಡನೇ ಬ್ಲಾಕ್ ನಿವಾಸಿ ಪುಟ್ಟಮ್ಮ ಎಂಬವರಿಗೆ ಸೇರಿದ ಕೊಟ್ಟಿಗೆಗೆ ದಾಳಿ ಮಾಡಿದ ನಾಯಿಗಳು 5 ಮೇಕೆಗಳನ್ನು ಬಲಿ ತೆಗೆದುಕೊಂಡಿವೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಪ್ಪ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಕೂಡಲೆ ನಿಯಂತ್ರಣ ಮಾಡುವಂತೆ ಗ್ರಾ.ಪಂ. ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.