ಮಡಿಕೇರಿ, ಆ. 21: ಕೊಡಗು ಜಿಲ್ಲಾ ಹವ್ಯಕ ಬ್ರಾಹ್ಮಣರ ಉತ್ತಮ ಜೀವನ ಸಹಕಾರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಸಂಘದ ಸದಸ್ಯರ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ವಿದ್ಯಾಭ್ಯಾಸದ ಪ್ರೋತ್ಸಾಹ ಧನವನ್ನು ಕೊಡಲಾಗುತ್ತದೆ. ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ವೀರಾಜಪೇಟೆಯ ಭಗವಾನ್ ಪ್ರೆಸ್ನಿಂದ ಪಡೆದು ಭರ್ತಿ ಮಾಡಿ ಸೆಪ್ಟಂಬರ್ 10 ರ ಮೊದಲು ಕೊಡುವಂತೆ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.