ಸೋಮವಾರಪೇಟೆ, ಆ. 22: ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಋಷಿ ಪೂಜೆ ನಡೆಯಿತು.
ಅರ್ಚಕ ಪ್ರಸನ್ನ ಭಟ್ ನೇತೃತ್ವದಲ್ಲಿ ಉಪಕರ್ಮ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು ನೆರವೇರಿದವು. ಸಮಾಜದ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಎಸ್.ಡಿ. ವಿಜೇತ್ ಸೇರಿದಂತೆ ಇತರರು ಪೂಜಾ ಕಾರ್ಯಗಳಲ್ಲಿ ಭಾಗವಹಿಸಿದ್ದರು.