ಮಡಿಕೇರಿ, ಆ. 22: ಕಳೆದ ಬಾರಿಯ ಸಂತ್ರಸ್ತರಿಗೆ ಜಂಬೂರು ಹಾಗೂ ಕರ್ಣಂಗೇರಿಯಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಆದಷ್ಟು ಶೀಘ್ರದಲ್ಲೇ ಸಂತ್ರಸ್ತರಿಗೆ ಹಸ್ತಾಂತರ ಮಾಡಲಾಗುವದು ಎಂದು ಸಚಿವ ಸುರೇಶ್‍ಕುಮಾರ್ ಭರವಸೆ ನೀಡಿದರು.ಕರ್ಣಂಗೇರಿ ಹಾಗೂ ಜಂಬೂರಿಗೆ ಭೇಟಿ ನೀಡಿ ಮನೆ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲಿಸಿ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಕರ್ಣಂಗೇರಿಯಲ್ಲಿ ಮೂವತ್ತೈದು ಮನೆಗಳ ಕಾಮಗಾರಿ ಪೂರ್ಣ ಗೊಂಡಿದ್ದು ಅಂತಿಮ ಹಂತದ ಕೆಲಸಗಳು ಬಾಕಿ ಇದ್ದು, ಒಂದು ತಿಂಗಳೊಳಗಾಗಿ ಸಿಎಂ ಬಳಿ ಮಾತನಾಡಿ ದಿನಾಂಕ ನಿಗದಿ ಮಾಡಿ ಆ ಮನೆಗಳನ್ನು ಸಂತ್ರಸ್ತರಿಗೆ ಹಸ್ತಾಂತರಿಸಲಾಗುವದು. ಜಂಬೂರಿನಲ್ಲಿ ಮುನ್ನೂರ ಐವತ್ತು ಮನೆಗಳ ನಿರ್ಮಾಣ ಕಾರ್ಯ ಬಹುತೇಕ ಪೂರ್ಣವಾಗಿದ್ದು, ಮೂಲಭೂತ ಸೌಕರ್ಯ ವ್ಯವಸ್ಥೆ ಕಲ್ಪಿಸಿದ ಬಳಿಕ ಮೂರು ತಿಂಗಳ ಒಳಗಾಗಿ ಹಸ್ತಾಂತರ ಮಾಡಲಾಗುವ ದೆಂದು ಸಚಿವರು ಹೇಳಿದರು. ಈಗಾಗಲೇ ಮನೆ ಹಸ್ತಾಂತರ ಬಹಳಷ್ಟು ತಡವಾಗಿದ್ದು ಇನ್ನು ಮುಂದೆ ಯಾವದೇ ಕಾರಣಕ್ಕೂ ವಿಳಂಬ ಮಾಡುವದಿಲ್ಲ ಎಂದು ನುಡಿದರು. ಮನೆಗಳ ಗುಣಮಟ್ಟ ಉತ್ತಮವಾಗಿದ್ದು ಸಂತ್ತಸ್ತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಈ ಬಾರಿಯ ಮಳೆಯಿಂದ ಸಂತ್ರಸ್ತರಾದವರಿಗೆ ಮನೆಗಳನ್ನು ನಿರ್ಮಿಸಿ ಕೊಡಲು ಸರ್ಕಾರಿ ಜಾಗ ಇದೆಯಾದರೂ ದಾನಿಗಳು ಜಾಗ ನೀಡಿದರೆ ಸ್ವೀಕರಿಸಲಾಗುವದು. ಯಾರಾದರೂ ಮಾರಾಟ ಮಾಡುವ ದಾದರೂ ಖರೀದಿಸಲಾಗುತ್ತದೆ ಒಟ್ಟಿನಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ವ್ಯವಸ್ಥೆ ಮಾಡಲಾಗುವದು ಎಂದರು.ಪ್ರಸಕ್ತ ವರ್ಷದಲ್ಲಿ ತೋರ ಮತ್ತು ಕಾವೇರಿ ನದಿ ಪಾತ್ರದ ಕರಡಿಗೋಡು, ಕುಂಬಾರಗುಂಡಿ ಮತ್ತಿತರ ಕಡೆಗಳಲ್ಲಿ
ಹೇಳಿದರು.
ಈ ಬಾರಿಯ ಮಳೆಯಿಂದ ಸಂತ್ರಸ್ತರಾದವರಿಗೆ ಮನೆಗಳನ್ನು ನಿರ್ಮಿಸಿ ಕೊಡಲು ಸರ್ಕಾರಿ ಜಾಗ ಇದೆಯಾದರೂ ದಾನಿಗಳು ಜಾಗ ನೀಡಿದರೆ ಸ್ವೀಕರಿಸಲಾಗುವದು. ಯಾರಾದರೂ ಮಾರಾಟ ಮಾಡುವ ದಾದರೂ ಖರೀದಿಸಲಾಗುತ್ತದೆ ಒಟ್ಟಿನಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ವ್ಯವಸ್ಥೆ ಮಾಡಲಾಗುವದು ಎಂದರು.
ಪ್ರಸಕ್ತ ವರ್ಷದಲ್ಲಿ ತೋರ ಮತ್ತು ಕಾವೇರಿ ನದಿ ಪಾತ್ರದ ಕರಡಿಗೋಡು, ಕುಂಬಾರಗುಂಡಿ ಮತ್ತಿತರ ಕಡೆಗಳಲ್ಲಿ (ಮೊದಲ ಪುಟದಿಂದ) ಹಸ್ತಾಂತರಿಸಲಾಗಿರುವ ಬಸವನಹಳ್ಳಿಯ ಮನೆಗಳನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಬಸವನಹಳ್ಳಿಯ ಪ್ರಮುಖರಾದ ಸ್ವಾಮಿಯಪ್ಪ ಹಾಗೂ ಸ್ಥಳೀಯರ ಅಹವಾಲು ಆಲಿಸಿದರು. ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಕಾಮಗಾರಿಗಳ ಬಗ್ಗೆ ಪರಿಶೀಲಿಸಿದರು. ಈಗಾಗಲೇ ಹಸ್ತಾಂತರಿಸಿರುವ ಮನೆಗಳಲ್ಲಿ ದಿಡ್ಡಳ್ಳಿ ಆದಿವಾಸಿಗಳು ವಾಸ ಮಾಡುತ್ತಿದ್ದಾರೆ ಎಂಬ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದರು.
ಬಳಿಕ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು ಜಲಾಶಯದ ನೀರಿನ ಸಂಗ್ರಹಣಾ ಸಾಮಥ್ರ್ಯ ಹಾಗೂ ಜಲಾನಯನ ವ್ಯಾಪ್ತಿಯ ಬಗ್ಗೆ ಮಾಹಿತಿ ಪಡೆದರು. ಬಳಿಕ ಹಾರಂಗಿ ಹಾಗೂ ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಅಲ್ಲಿನ ಸ್ಥಳೀಯರ ಅಹವಾಲು ಆಲಿಸಿದರು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಾಜ್‍ಕುಮಾರ್ ಖತ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪವಿಭಾಗಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ಮಹೇಶ್, ಗೋವಿಂದರಾಜು, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಇಬ್ರಾಹಿಂ, ತಾ.ಪಂ.ಇಒ ಲಕ್ಷ್ಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಮು, ರಾಜೀವ್ ಗಾಂಧಿ ವಸತಿ ನಿಗಮದ ಎಂಜಿನಿಯರ್ ಶ್ರೀನಿವಾಸ್, ಬಿಜೆಪಿ ಜಿಲ್ಲಾಧ್ಯಕ್ಷ ಭಾರತೀಶ್, ಪ್ರಧಾನ ಕಾರ್ಯದರ್ಶಿ ರವಿಕುಶಾಲಪ್ಪ, ಮನುಮುತ್ತಪ್ಪ ಇತರರು ಇದ್ದರು.