ವೀರಾಜಪೇಟೆ, ಆ. 21: ಪಟ್ಟಣದ ಛತ್ರಕೆರೆ ಬಳಿಯಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಘವೇಂದ್ರಸ್ವಾಮಿ ಆರಾಧನೆಯನ್ನು ಶ್ರದ್ಧಾಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರೀ ರಾಘವೇಂದ್ರಸ್ವಾಮಿ ಆರಾಧನೆ ಪ್ರಯುಕ್ತ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕಾರ್ಯಗಳು ನಡೆದು ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗದ ಬಳಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರುಗಳು ಹಾಜರಿದ್ದರು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಿಂದಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು.