ಮಡಿಕೇರಿ, ಆ. 22: ಭಾರತೀಯ ಸೇನೆಯವರು ವಿವಿಧ ಸೈನಿಕ ಹುದ್ದೆಗಳಿಗೆ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 4 ರವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಹಾಜರಾಗುವ ಅಭ್ಯರ್ಥಿಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೇನಾ ನೇಮಕಾತಿ ಸಾಮಾನ್ಯ ಲಿಖಿತ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಯು ಸೆಪ್ಟೆಂಬರ್ 6 ರಿಂದ 15 ರವರೆಗೆ ಮಡಿಕೇರಿಯಲ್ಲಿ ಆಯೋಜಿಸಲಾಗಿದೆ. ಪರೀಕ್ಷಾ ಪೂರ್ವ ತರಬೇತಿಯಲ್ಲಿ ವಿವಿಧ ಸೈನಿಕ ಹುದ್ದೆಗಳ ನೇಮಕಾತಿಗೆ ಭಾರತೀಯ ಸೇನೆಯವರು ನಿಗದಿಪಡಿಸಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ಗುಣಮಟ್ಟದ ತರಬೇತಿ ನೀಡಲಾಗುವದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಅಥವಾ ಅಂಚೆ ಕಾರ್ಡಿನ ಮುಖಾಂತರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ತಿಳಿಸಿದ್ದಾರೆ.