ಮಡಿಕೇರಿ, ಆ. 23: ಕೊಡಗು ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಶನ್ ವತಿಯಿಂದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ 18 ವರ್ಷದೊಳಗಿನ ವಿಭಾಗದಲ್ಲಿ ಬೊಳ್ತಜ್ಜೆ ಗಗನ್ ಅಶೋಕ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.

ಸಿಂಗಲ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಡಬಲ್ಸ್‍ನಲ್ಲಿ ಗಗನ್ ಹಾಗೂ ಪ್ರಜ್ವಲ್ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಪುರುಷರ ವಿಭಾಗದ ಸಿಂಗಲ್ಸ್‍ನಲ್ಲಿ ಗಗನ್ ದ್ವಿತೀಯ ಸ್ಥಾನ ಗಳಿಸಿದ್ದಾನೆ.