ಸುಂಟಿಕೊಪ್ಪ, ಆ. 23: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳ ಒಕ್ಕೂಟ ಗದ್ದೆಹಳ್ಳ ಕೆದಕಲ್ ಸ್ವ ಸಹಾಯ ಸಂಘಗಳÀ ಜೊತೆ ಸೇರಿ ಸದಸ್ಯರು ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯವನ್ನು ನಡೆಸಿದರು.
ಪರಮ ಪೂಜ್ಯ ವೀರೇಂದ್ರ ಹೆಗ್ಡೆಯವರ ಮಹಾತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತೆ ಕಾರ್ಯಕ್ರಮದಡಿಯಲ್ಲಿ ಗದ್ದೆಹಳ್ಳ ಕೆದಕಲ್ ಒಕ್ಕೂಟ ಸದಸ್ಯರು ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳ ಸದಸ್ಯರು ಜಮಾವಣೆಗೊಂಡು ದೇವಾಲಯದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡ ಗುಂಟೆ ಕಡಿದು, ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು.
ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ನಾಗರತ್ನ ಸುರೇಶ್, ದೇವಸ್ಥಾನ ಆಡಳಿತ ಸಮಿತಿ ಕಾರ್ಯದರ್ಶಿ ಸುರೇಶ್ ಗೋಪಿ, ಸೇವಾ ಪ್ರತಿನಿಧಿ ಜ್ಯೋತಿ ಲಕ್ಷ್ಮಿ, ಸ್ವ ಸಹಾಯ ಸಂಘದ ಸದಸ್ಯರು ಇದ್ದರು.