ಸೋಮವಾರಪೇಟೆ, ಆ.23: ಜಿಲ್ಲೆಯ ಈರ್ವರು ಶಾಸಕರ ಪೈಕಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡುವದರಿಂದಿಗೆ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಬೇಕೆಂದು ಕರ್ನಾಟಕ ಕಾವಲು ಪಡೆಯ ತಾಲೂಕು ಘಟಕ ಆಗ್ರಹಿಸಿದ್ದು, ತಾಲೂಕು ತಹಶೀಲ್ದಾರ್ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಮಳೆಯಿಂದಾಗಿ ಈಗಾಗಲೇ ಸಾಕಷ್ಟು ಹಾನಿಯಾಗಿದೆ. ಜನರ ಸಮಸ್ಯೆಯನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. ಕೂಡಲೇ ಜಿಲ್ಲೆಯ ಶಾಸಕರನ್ನು ಸಚಿವರನ್ನಾಗಿ ನೇಮಕ ಮಾಡಬೇಕೆಂದು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಕೆ.ಆರ್. ಮಂಜುನಾಥ್ ಮನವಿ ಮಾಡಿದರು. ತಪ್ಪಿದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದರು.

ಈ ಸಂದರ್ಭ ಸಂಘಟನೆಯ ಪದಾಧಿಕಾರಿಗಳಾದ ಎಸ್.ಬಿ. ರಾಜೇಶ್, ಸತೀಶ್, ಸುಪ್ರಿತ್, ಅಭಿಷೇಕ್ ಹಾಗೂ ಸುಬ್ಬಯ್ಯ ಇದ್ದರು.