ಮಡಿಕೇರಿ, ಆ. 23: ಸಾಯಿಶಂಕರ್ ಶಿಕ್ಷಣ ಸಂಸ್ಥೆಯಲ್ಲಿ ಸದ್ಭಾವನಾ ದಿನ ಆಚರಿಸಲಾಯಿತು.

ಸಾಯಿಶಂಕರ್ ಬಿ.ಇಡಿ ಪ್ರಾಂಶುಪಾಲ ಪಿ.ಎ. ನಾರಾಯಣ ಅವರು ದಿನದ ಮಹತ್ವವನ್ನು ತಿಳಿಸುತ್ತಾ, ಭಾರತದ ಮಾಜಿ ಪ್ರಧಾನಿಗಳಾದ ರಾಜೀವ್‍ಗಾಂಧಿಯವರ ಜನ್ಮದಿನವನ್ನು ಸ್ಮರಿಸುತ್ತಾ ಸದ್ಭಾವನಾ ದಿನದ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಈ ಸಂದರ್ಭದಲ್ಲಿ ಸಾಯಿಶಂಕರ್ ಕಾಲೇಜು ಪ್ರಾಂಶುಪಾಲೆ ದಶಮಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಉಮಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಕಾವೇರಿಯಮ್ಮ, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.