ಕೂಡಿಗೆ, ಆ. 24: ಬೆಂಗಳೂರಿನ ಲಯನ್ಸ್ ಕ್ಲಬ್‍ನ ವತಿಯಿಂದ ಕೂಡಿಗೆ ಸದ್ಗುರು ಅಪ್ಪಯ್ಯ ಪ್ರೌಢಶಾಲೆಯ ವತಿಯಿಂದ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು.

ಬೆಂಗಳೂರಿನ ಲಯನ್ಸ್ ಕ್ಲಬ್‍ನ ಅಧ್ಯಕ್ಷ ಚಂದ್ರಶೇಖರ್ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, ಸಂಸ್ಥೆಯು ಹಲವು ಸಮಾಜ ಸೇವೆಗಳಲ್ಲಿ ತೊಡಗಿದ್ದು, ಆರೋಗ್ಯ ತಪಾಸಣೆ, ಸಮಾಜಕ್ಕೆ ಒಳಿತಾಗುವ ಮತ್ತು ಪರಿಸರ ಸಂರಕ್ಷಣೆಯಲ್ಲಿ ತೊಡಗುವ ವಿವಿಧ ಕಾರ್ಯಕ್ರಮಗಳನ್ನು ಸಂಸ್ಥೆಯ ಮೂಲಕ ಮಾಡಲಾಗುತ್ತಿದೆ. ಅದಕ್ಕೆ ಪೂರಕವಾಗುವಂತೆ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಲಯನ್ಸ್ ಕ್ಲಬ್ ವತಿಯಿಂದ ಉಚಿತವಾಗಿ ನೋಟ್ ಪುಸ್ತಕಗಳನ್ನು ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ ಎಂದರು.

8, 9, 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭ ಸದ್ಗುರು ಅಪ್ಪಯ್ಯ ಪ್ರೌಢಶಾಲೆಯ ಆಡಳಿತ ಮಂಡಳಿಯ ಖಜಾಂಚಿ ಎಂ.ಬಿ. ಜಯಂತ್, ಶಾಲಾ ಮುಖ್ಯೋಪಾಧ್ಯಾಯಿನಿ ಎ.ವಿ. ಸ್ವಾತಿ, ಹಿರಿಯ ಶಿಕ್ಷಕ ದುರ್ಗೇಶ್, ಕುಶಾಲನಗರ ದೈಹಿಕ ಶಿಕ್ಷಣ ಶಿಕ್ಷಕ ಡಾ. ಸದಾಶಿವ ಎಸ್. ಪಲ್ಲೇದ್, ಕೂಡಿಗೆ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.