ಮಡಿಕೇರಿ, ಆ. 24: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಹಾಗೂ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿಸಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಹನೀಯರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ದಿ. ದೇವರಾಜ ಅರಸು ಅವರು ಸಮಾಜಮುಖಿ ಗುಣಗಳೊಂದಿಗೆ ಹಿಂದುಳಿದವರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದು, ಇವರ ಆಡಳಿತ ಇತರರಿಗೆ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಕೆಪಿಸಿಸಿ ಪದಾಧಿಕಾರಿ ಟಿ.ಪಿ. ರಮೇಶ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಜಿಲ್ಲಾ ಕಾಂಗ್ರೆಸ್ ವಕ್ತಾರÀ ಟಾಟು ಮೊಣ್ಣಪ್ಪ, ಟಿ.ಈ. ಸುರೇಶ್, ಸೇವಾದಳದ ಜಿಲ್ಲಾಧ್ಯಕ್ಷÀ ಕಾವೇರಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷÀ ಹನೀಫ್ ಸಂಪಾಜೆ, ಐಎನ್‍ಟಿಯುಸಿ ಜಿಲ್ಲಾಧ್ಯಕ್ಷÀ ಯತೀಶ್, ಮಾಜಿ ಕೆಪಿಸಿಸಿ ಪದಾಧಿಕಾರಿ ಉಸ್ಮಾನ್, ನಾಪೆÇೀಕ್ಲು ಬ್ಲಾಕ್ ಅಧ್ಯಕ್ಷ ಬೇಕಲ್ ರಮಾನಾಥ್, ಮಡಿಕೇರಿ ನಗರಾಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸಾಮಾಜಿಕ ಜಾಲತಾಣದ ಸಂಚಾಲಕ ಹೊಸೂರು ಸೂರಜ್, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಸರಾಚಂಗಪ್ಪ, ನಗರಸಭೆಯ ಮಾಜಿ ಸದಸ್ಯರಾದ ಪ್ರಕಾಶ್ ಆಚಾರ್ಯ, ಎ.ಸಿ. ಚುಮ್ಮಿ ದೇವಯ್ಯ, ಯುವ ಕಾಂಗ್ರೆಸ್‍ನ ಸದಾ ಮುದ್ದಪ್ಪ, ನಗರ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಡಿಸಿಸಿ ಸದಸ್ಯ ಹನೀಫ್, ಸೇವಾದಳದ ಪ್ರೇಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.