ಮಡಿಕೇರಿ, ಆ. 24 : ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 26 ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ, ತಾ. 27 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಆವರಣ, ತಾ. 28 ರಂದು ನಗರದ ಗೌಳಿಬೀದಿ ಲೋಕಾಯುಕ್ತ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ವಿತರಿಸಲಿರುವರು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ದೂ. 08272-220797ನ್ನು ಸಂಪರ್ಕಿಸಬಹುದು.