ಮಡಿಕೇರಿ, ಆ. 24: ಕೊಡಗು ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲಾ ಬಾಲ ಭವನ ಸಮಿತಿ ಇಲ್ಲಿ ಗೌರವಧನ ಆಧಾರದ ಮೇಲೆ ಸಿಬ್ಬಂದಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿಯು ತಾತ್ಕಾಲಿಕ ವಾಗಿದೆ. ಕಚೇರಿ ಸಹಾಯಕರು-1 ಹುದ್ದೆ. ಪಿ.ಯು.ಸಿ. ಮತ್ತು ಮೇಲ್ಪಟ್ಟ ವಿದ್ಯಾರ್ಹತೆ ಕಂಪ್ಯೂಟರ್ ಬಳಕೆಯಲ್ಲಿ ಪರಿಣತಿ ಹೊಂದಿರಬೇಕು, ಚಿತ್ರಕಲೆ, ನಾಟಕ, ಸಂಗೀತ, ಕರಕುಶಲ ಕಲೆ, ಯಾವದಾದರೊಂದು ಕ್ಷೇತ್ರದಲ್ಲಿ ಪರಿಣತಿ ಹೊಂದಿರಬೇಕು. ಇಲಾಖೆಯಲ್ಲಿ ಕೆಲಸ ನಿರ್ವಹಿಸಿದ ಅನುಭವವಿದ್ದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವದು.
ಅರ್ಜಿದಾರರು ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ತಾ. 30 ರಂದು ಸಂಜೆ 4 ಗಂಟೆಯೊಳಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್ ಬಳಿ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಎಲ್ಲಾ ವಿದ್ಯಾರ್ಹತೆಯ ದಾಖಲೆ ಗಳೊಡನೆ ಕಚೇರಿಗೆ ಸಲ್ಲಿಸುವದು. ಹೆಚ್ಚಿನ ಮಾಹಿತಿಗೆ ದೂ. 9611587016, 08272-298379 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.