ನಾಪೋಕ್ಲು, ಆ. 24: ರವೀಂದ್ರ ಎಂ.ಕೆ. ಅವರಿಗೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಬಿ. ಜಯರಾಮ ಭಟ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೌಢಶಿಕ್ಷಣದಲ್ಲಿ ಖಾಸಗಿಯವರ ಸಹಭಾಗಿತ್ವ ಎಂಬ ಮಹಾಪ್ರಬಂಧಕ್ಕೆ ಇವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ರವೀಂದ್ರ ಎಂ.ಕೆ. ಚೆಂಬು ಗ್ರಾಮದ ಕುಂಞÂರಾಮ ಮತ್ತು ಮೀನಾಕ್ಷಿ ದಂಪತಿಗಳ ಪುತ್ರ. ಇವರ ಹಲವು ಸಂಶೋಧನಾ ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರರಾಷ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಕುವೆಂಪು ವಿಶ್ವವಿದ್ಯಾಲಯದ ಪದವಿ ಕಾಲೇಜಿನಲ್ಲಿ ಅರ್ಥಶಾಸ್ತ್ರ ಸಹಾಯಕ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.