ಬೆಂಗಳೂರು, ಆ. 24: ಕೊಡಗು ಜಿಲ್ಲೆಯ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.ಸಚಿವ ಸ್ಥಾನ ಹಂಚಿಕೆ ಬಳಿಕ ಮೊದಲ ಬಾರಿಗೆ ಮುಖ್ಯಮಂತ್ರಿಗಳನ್ನು ಬೋಪಯ್ಯ ಸೌಹಾರ್ದಯುತ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಹಿಂದೆ ಸ್ಪೀಕರ್ ಆಗಿದ್ದ ಬೋಪಯ್ಯ ಅವರು, ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಬೋಪಯ್ಯ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಬೋಪಯ್ಯ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆಂದು ತಿಳಿದು ಬಂದಿದೆ.
-ಬಿ.ಜಿ.ಆರ್.