ಕುಶಾಲನಗರ, ಆ. 25: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ನೂತನ ಆಡಳಿತ ಮಂಡಳಿ ಕಾರ್ಯಚಟುವಟಿಕೆಗಳಿಗೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು.

ಸ್ಥಳೀಯ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಚಾಲನೆ ನೀಡಿದರು.

ಮಹಾಸಭಾದ ಕಾರ್ಯದರ್ಶಿ ಕಾಂತರಾಜು ಪ್ರಾಸ್ತಾವಿಕ ನುಡಿಗಳಾಡಿದರು.

ವೇದಿಕೆಯಲ್ಲಿ ಘಟಕದ ಅಧ್ಯಕ್ಷ ಎಚ್.ವಿ. ಶಿವಪ್ಪ, ಉಪಾಧ್ಯಕ್ಷೆ ಮಮತ ಸತೀಶ್, ಕಾಂತರಾಜು, ನಿಕಟಪೂರ್ವ ಅಧ್ಯಕ್ಷ ಧರ್ಮಪ್ಪ, ಜಿಪಂ ಸದಸ್ಯೆ ಕುಮುದ ಧರ್ಮಪ್ಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಮಹೇಶ್, ರಾಜ್ಯ ಘಟಕದ ಕಾರ್ಯದರ್ಶಿ ರಾಜೇಶ್ವರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ, ಖಜಾಂಚಿ ಉದಯಕುಮಾರ್, ಸೋಮವಾರ ಪೇಟೆ ತಾಲೂಕು ವೀರಶೈವ ಸಮಾಜ ಅಧ್ಯಕ್ಷ ಹಾಲಪ್ಪ, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹದೇವಪ್ಪ ಮತ್ತಿತರರು ಇದ್ದರು.

ಕಾರ್ಯಕ್ರಮದಲ್ಲಿ ಪ್ರಕೃತಿ ವಿಕೋಪದಲ್ಲಿ ಮಡಿದವರಿಗೆ, ಅಗಲಿದ ದೇಶದ ಹಿರಿಯ ನಾಯಕರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಮಾಜದ ಅಭಿವೃದ್ಧಿಗೆ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.