ಸುಂಟಿಕೊಪ್ಪ, ಆ. 25: ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಂಡರೆ ಜೀವನ ಸುಗಮವಾಗಲಿದೆ. ಶಿಸ್ತು ಪ್ರತಿಯೊಬ್ಬರ ಬದುಕಿನಲ್ಲಿ ಅಳವಡಿಸಿಕೊಳ್ಳುವದು ಅಗತ್ಯವಾದುದು ಎಂದು ಸುಂಟಿಕೊಪ್ಪ ಪ್ರೌಢಶಾಲೆಯ ಸಹ ಶಿಕ್ಷಕ ಸೋಮಶೇಖರ್ ಹೇಳಿದರು.
ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಬಾಷಣಕಾರರಾಗಿ ಮಾತನಾಡಿದ ಅವರು ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳ ಜವಾಬ್ಧಾರಿ ಹೆಚ್ಚಲಿದ್ದು ಶಾಲೆಯ ಆಗು ಹೋಗುಗಳ ಬಗ್ಗೆ ಗಮನಹರಿಸಿ ಶಾಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಕಳೆದ ವರ್ಷ ನಮ್ಮ ಶಾಲೆಯ ಎಸ್ಎಸ್ಎಲ್ಸಿ ಫಲಿತಾಂಶ ಕುಂಠಿತವಾಗಲು ವಿದ್ಯಾರ್ಥಿಗಳಲ್ಲಿ ಅಶಿಸ್ತೇ ಕಾರಣವಾಗಿದೆ. ಈ ವರ್ಷ ವಿದ್ಯಾರ್ಥಿಗಳು ವ್ಯಾಸಂಗದ ಕಡೆ ಹೆಚ್ಚಿನ ಮುತುವರ್ಜಿವಹಿಸಿ ಶಾಲೆಗೆ ಉತ್ತಮ ಫಲಿತಾಂಶ ತರಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ಸಂಘದಿಂದ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡಬೇಕು ಮಹಾತ್ಮ ಗಾಂಧೀಜಿ ಮಾಜಿ ರಾಷ್ಟ್ರಪತಿ ದಿ. ಎಪಿಜೆ ಅಬ್ದುಲ್ಕಲಾಂ ಅವರ ಆದರ್ಶವನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷೆ ರೋಸ್ಮೇರಿ ರಾಡ್ರಿಗಸ್ ಅವರು ವಿದ್ಯಾರ್ಥಿ ಸಂಘ ರಚನೆಯಿಂದ ನಿಮ್ಮ ಜವಾಬ್ದಾರಿ ಹೆಚ್ಚಿದೆ ವಿದ್ಯಾರ್ಥಿ ನಾಯಕರು ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವದಲ್ಲದೆ ವಿದ್ಯಾರ್ಜನೆಯಲ್ಲಿ ತಲ್ಲೀನರಾಗಬೇಕೆಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ವಿದ್ಯಾರ್ಥಿ ಸಂಘದಿಂದ ನಿಮ್ಮ ಬೇಡಿಕೆ ಈಡೇರಿಸಬಹುದು. ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವದರ ಮೂಲಕ ಉತ್ತಮ ಫಲಿತಾಂಶ ತರುವಲ್ಲಿಯೂ ವಿದ್ಯಾರ್ಥಿ ಸಂಘದ ನಾಯಕರ ಪಾಲು ಇದೆ ಎಂದು ಹೇಳಿದರು.
2019-20ನೇ ಸಾಲಿಗೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಸುಂಟಿಕೊಪ್ಪ ಪ್ರೌಢಶಾಲೆಯ ಸಹ ಶಿಕ್ಷಕ ಸಿ.ಟಿ. ಸೋಮಶೇಖರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲೆಯಲ್ಲಿ ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಶಂಷೀರ, ಆದಿತ್ಯ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಎಂ.ಆರ್.ಸುನಂದ, ಎಸ್.ಆರ್.ಚಿತ್ರಾ, ಜಯಶ್ರೀ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ, ಉಪಾಧ್ಯಕ್ಷೆ ವಿಶಾಲಿ, ಸದಸ್ಯ ಮುಬಾರಕ್ ಇದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಂತ ಹೆಗಡೆ ಸ್ವಾಗತಿಸಿ, ಪುಷ್ಪಾ ನಿರೂಪಿಸಿ, ಪವಿತ್ರ ವಂದಿಸಿದರು. ವಿದ್ಯಾರ್ಥಿಗಳು ಸಂಘದಿಂದ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡಬೇಕು ಮಹಾತ್ಮ ಗಾಂಧೀಜಿ ಮಾಜಿ ರಾಷ್ಟ್ರಪತಿ ದಿ. ಎಪಿಜೆ ಅಬ್ದುಲ್ಕಲಾಂ ಅವರ ಆದರ್ಶವನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷೆ ರೋಸ್ಮೇರಿ ರಾಡ್ರಿಗಸ್ ಅವರು ವಿದ್ಯಾರ್ಥಿ ಸಂಘ ರಚನೆಯಿಂದ ನಿಮ್ಮ ಜವಾಬ್ದಾರಿ ಹೆಚ್ಚಿದೆ ವಿದ್ಯಾರ್ಥಿ ನಾಯಕರು ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವದಲ್ಲದೆ ವಿದ್ಯಾರ್ಜನೆಯಲ್ಲಿ ತಲ್ಲೀನರಾಗಬೇಕೆಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ವಿದ್ಯಾರ್ಥಿ ಸಂಘದಿಂದ ನಿಮ್ಮ ಬೇಡಿಕೆ ಈಡೇರಿಸಬಹುದು. ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವದರ ಮೂಲಕ ಉತ್ತಮ ಫಲಿತಾಂಶ ತರುವಲ್ಲಿಯೂ ವಿದ್ಯಾರ್ಥಿ ಸಂಘದ ನಾಯಕರ ಪಾಲು ಇದೆ ಎಂದು ಹೇಳಿದರು.
2019-20ನೇ ಸಾಲಿಗೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಸುಂಟಿಕೊಪ್ಪ ಪ್ರೌಢಶಾಲೆಯ ಸಹ ಶಿಕ್ಷಕ ಸಿ.ಟಿ. ಸೋಮಶೇಖರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲೆಯಲ್ಲಿ ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಶಂಷೀರ, ಆದಿತ್ಯ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಎಂ.ಆರ್.ಸುನಂದ, ಎಸ್.ಆರ್.ಚಿತ್ರಾ, ಜಯಶ್ರೀ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ, ಉಪಾಧ್ಯಕ್ಷೆ ವಿಶಾಲಿ, ಸದಸ್ಯ ಮುಬಾರಕ್ ಇದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಂತ ಹೆಗಡೆ ಸ್ವಾಗತಿಸಿ, ಪುಷ್ಪಾ ನಿರೂಪಿಸಿ, ಪವಿತ್ರ ವಂದಿಸಿದರು.