ಸಿದ್ದಾಪುರ, ಆ. 25: ನೆಲ್ಯಹುದಿಕೇರಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇರುವ ಪರಿಹಾರ ಕೇಂದ್ರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭೇಟಿ ನೀಡಿ ಸಂತ್ರಸ್ತರಿಗೆ ಶಾಶ್ವತ ಸೂರು ಒದಗಿಸಿಕೊಡುವ ಬಗ್ಗೆ ಭರವಸೆ ನೀಡಿದರು.

ಸಂತ್ರಸ್ತರಿಗಾಗಿ ಶಾಶ್ವತ ಸೂರು ಒದಗಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಭೂಮಿಗಳನ್ನು ತಾ. 28 ರಂದು ಸರ್ವೆ ಕಾರ್ಯ ನಡೆಸಲಾಗುವದು ಎಂದು ತಿಳಿಸಿದರು.

ಈ ಸಂದರ್ಭ ಉಪವಿಭಾಗಾದಿ üಕಾರಿ ಜವರೇಗೌಡ ಸೋಮವಾರ ಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್, ಗ್ರಾಮಲೆಕ್ಕಿಗ ಸಂತೋಷ್, ಪರಿವೀಕ್ಷಕ ಮಧು ಸೂದನ್ ಜಿಲ್ಲಾ ಪಂಚಾಯತ್ ಸದಸ್ಯೆ ಸುನೀತ ಮಂಜುನಾಥ್, ತಾಲೂಕು ಪಂಚಾಯತಿ ಸದಸ್ಯೆ ಸುಹಾದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ, ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.