ಸೋಮವಾರಪೇಟೆ, ಆ. 25: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಇಕೋಕ್ಲಬ್ ವತಿಯಿಂದ ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪನೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಪರಿಸರ ಜಾಗೃತಿ ಆಂದೋಲನ ಸಮಿತಿಯ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಹನುಮಂತಪ್ಪ ತಳವಾರ, ಸಹಶಿಕ್ಷಕರಾದ ಅನಿತಾ, ಮೂರ್ತಿ, ರಶ್ಮಿ, ಮಮತ, ಮಂಜಪ್ಪ ಮತ್ತಿತರರು ಪಾಲ್ಗೊಂಡಿದ್ದರು. ಪರಿಸರ ರಕ್ಷಣೆ ಕುರಿತು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.