ಸೋಮವಾರಪೇಟೆ, ಆ. 25: ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಘಟಕ ಹಾಗೂ ಇಕೋ ಕ್ಲಬ್, ರೆಡ್‍ಕ್ರಾಸ್ ಘಟಕದ ವತಿಯಿಂದ, ಪ್ರವಾಹದಿಂದ ಹಾನಿಗೀಡಾದ ತಾಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಮನೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಕಾಲೇಜಿನ ಸಂಚಾಲಕ ಎಂ. ರಾಯಪ್ಪ, ಪ್ರಾಂಶುಪಾಲ ಅಂತೋಣಿರಾಜ್, ಕಾರ್ಯಕ್ರಮದ ಯೋಜನಾಧಿಕಾರಿ ಆನಂದ್ ಸೇರಿದಂತೆ ಉಪನ್ಯಾಸಕ ವೃಂದದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ನಿರ್ವಹಿಸಿದರು.

ಇದರೊಂದಿಗೆ ಓಎಲ್‍ವಿ ಚರ್ಚ್‍ನ ಯುವಕ ಸಂಘದ ಪದಾಧಿಕಾರಿಗಳೊಂದಿಗೆ ನೆಲ್ಲಿಹುದಿಕೇರಿ ಸಮೀಪದ ಬೆಟ್ಟದಕಾಡು ಗ್ರಾಮದಲ್ಲಿ ಶ್ರಮದಾನದ ಮೂಲಕ ಮನೆಗಳನ್ನು ಸ್ವಚ್ಛಗೊಳಿಸಿದರು.