ಮಡಿಕೇರಿ, ಆ. 26: ಪ್ರಾದೇಶಿಕ ಸಾರಿಗೆ ಕಚೇರಿ ವ್ಯಾಪ್ತಿಯಲ್ಲಿ ಮೋಟಾರು ವಾಹನ ನಿರೀಕ್ಷಕರು ತಪಾಸಣೆ ನಡೆಸಿದ ಸಂದರ್ಭ, ವಿವಿಧ ಪ್ರಕರಣಗಳಲ್ಲಿ ಪ್ರಕರಣ ದಾಖಲಿಸಿದ ಹಾಗೂ ತೆರಿಗೆ ಪಾವತಿಸದ ನಾಲ್ಕು ವಾಹನಗಳನ್ನು ಮುಟ್ಟುಗೋಲು ಹಾಕಿದ್ದು ಈ ವಾಹನಗಳನ್ನು ತಾ. 29 ರಂದು ವಾಹನ ಇರುವ ಸ್ಥಿತಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಹಿರಂಗ ಹರಾಜು ಮಾಡಲಾಗುವದು ಎಂದು ತಿಳಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಹರಾಜು ದಿನಾಂಕವನ್ನು ಮುಂದೂಡಲಾಗಿದೆ. ಮುಂದಿನ ಹರಾಜು ದಿನಾಂಕವನ್ನು ನಂತರ ಪ್ರಕಟಿಸಲಾಗುವದು ಎಂದು ಮಡಿಕೇರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.