ಕೂಡಿಗೆ, ಆ. 27: ಕರ್ನಾಟಕ ಮಾನವ ಹಕ್ಕುಗಳ ಜನ ಜಾಗೃತಿ ವೇದಿಕೆ ಹಾಗೂ ಬೆಂಗಳೂರಿನ ರಾಜ ರಾಜೇಶ್ವರಿ ಆಸ್ಪತ್ರೆ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಕುಶಾಲನಗರದ ಮುಳ್ಳುಸೋಗೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂತ್ರಸ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಈ ಶಿಬಿರಕ್ಕೆ ಕರ್ನಾಟಕ ಮಾನವ ಹಕ್ಕುಗಳ ಜನ ಜಾಗೃತಿ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ. ಅಶ್ವಥ್ ನಾಗರ ಚಾಲನೆ ನೀಡಿದರು.

ಕರ್ನಾಟಕ ಮಾನವ ಹಕ್ಕುಗಳ ಜನ ಜಾಗೃತಿ ವೇದಿಕೆಯ ವ್ಯಾಪಾರಿ ಘಟಕದ ರಾಜ್ಯಾಧ್ಯಕ್ಷ ಎನ್. ಗುರುಸ್ವಾಮಿ, ವೇದಿಕೆಯ ಸಾರಿಗೆ ಘಟಕದ ರಾಜ್ಯಾಧ್ಯಕ್ಷ ಮಾರುತಿ, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಆರ್. ಗಿರೀಶ್, ಯುವ ಘಟಕದ ಅಧ್ಯಕ್ಷ ಸಚಿನ್, ಜಿಲ್ಲಾ ಮಾಧ್ಯಮ ಸಲಹೆಗಾರ ಕೆ.ಟಿ. ಶ್ರೀನಿವಾಸ್, ಕಾರ್ಮಿಕ ಘಟಕದ ಅಧ್ಯಕ್ಷ ಯೋಗೇಶ್, ರಾಜೇಶ್, ಹರೀಶ್, ಬೇಬಿ, ದೇವು ಸೇರಿದಂತೆ ರಾಜ್ಯ ಮಟ್ಟದ ಎಲ್ಲಾ ಪದಾಧಿಕಾರಿಗಳು ಹಾಗೂ ಶ್ರೀರಾಜ ರಾಜೇಶ್ವರಿ ಆಸ್ಪತ್ರೆಯ ಎಲ್ಲಾ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ತಂಡ ಪಾಲ್ಗೊಂಡಿತ್ತು.