ಸೋಮವಾರಪೇಟೆ, ಆ. 27: ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘದ ಬಿ.ಟಿ.ಸಿ.ಜಿ. ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ಮತದಾರ ಸಾಕ್ಷರತಾ ಸಂಘವನ್ನು ಉದ್ಘಾಟಿಸಲಾಯಿತು.
ಸ್ಪಂದನ ಗ್ರಾಮೀಣ ಶಿಕ್ಷಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ಹೆಚ್.ಆರ್. ಸುರೇಶ್ ಮಾತನಾಡಿ, ದೇಶದ ಸಂವಿಧಾನವನ್ನು ಗೌರವಿಸುವದರೊಂದಿಗೆ ಬಲಿಷ್ಠ ಭಾರತವನ್ನು ಕಟ್ಟುವ ಜನಪ್ರತಿನಿಧಿಗಳನ್ನು ಯುವಜನತೆ ಆಯ್ಕೆ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಿಸಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಹೆಚ್.ಎಸ್. ಶರಣ್ ವಹಿಸಿದ್ದರು. ಚಾಣಕ್ಯ ಕಾಲೇಜಿನ ಪ್ರಾಂಶುಪಾಲ ಹೆಚ್.ಬಿ. ಬೆಳ್ಳಿಯಪ್ಪ, ಕಾಲೇಜಿನ ಮತದಾರ ಸಾಕ್ಷರತಾ ಸಂಘದ ನೋಡಲ್ ಅಧಿಕಾರಿ, ಉಪನ್ಯಾಸಕಿ ಗೋಪಿಕಾ, ವಿದ್ಯಾರ್ಥಿ ಪ್ರತಿನಿಧಿಗಳಾದ ಸ್ವೀಟಿ, ಮಂಜುನಾಥ, ಚಿರಂತ್ ಉಪಸ್ಥಿತರಿದ್ದರು.