ಶನಿವಾರಸಂತೆ, ಆ. 27: ಶನಿವಾರಸಂತೆ ಹೋಬಳಿಯಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಗಣೇಶ ಸೇವಾ ಸಮಿತಿ ವತಿಯಿಂದ ಗೌರಿ - ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ವೃತ್ತ ನಿರೀಕ್ಷಕ ನಂಜುಂಡೇಗೌಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೌರಿ - ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೊದಲು ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಿ, ಅನುಮತಿ ಪಡೆಯಬೇಕು, ಪ್ರತಿಷ್ಠಾಪನೆ ದಿನದಿಂದ ವಿಸರ್ಜನೆ ದಿನದವರೆಗೂ ಪಟಾಕಿ ಸಿಡಿಸುವದು, ಡಿಜೆ ಸೌಂಡ್, ಸಾರ್ವಜನಿಕರಿಗೆ ತೊಂದರೆ ಮಾಡುವ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ ಹಾಗೂ ಸೌಹರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಸೇವಾ ಸಮಿತಿ, ಸಂಘ - ಸಂಸ್ಥೆ ಪದಾಧಿಕಾರಿಗಳಿಗೆ ಸೂಚಿಸಿದರು. ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ, ಸಹಾಯಕ ಠಾಣಾಧಿಕಾರಿಗಳಾದ ಶಿವಲಿಂಗ, ಹೆಚ್.ಎಂ. ಗೋವಿಂದ್ ಹಾಗೂ ಸಂಘ ಸಂಸ್ಥೆ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದು, ಪೊಲೀಸ್ ಸಿಬ್ಬಂದಿಗಳಾದ ಬೋಪಣ್ಣ ಸ್ವಾಗತಿಸಿ, ಶಫೀರ್ ವಂದಿಸಿದರು.