ಮಡಿಕೇರಿ, ಆ. 27: ಇತ್ತೀಚೆಗೆ ಜಿಲ್ಲೆಯಲ್ಲಿ ಸಂಭ ವಿಸಿದ ಪ್ರಾಕೃತಿಕ ವಿಕೋಪದ ಹಾನಿಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಅವರು ತಾ. 30 ರಂದು ಮಧ್ಯಾಹ್ನ 1 ಗಂಟೆಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲಿದ್ದಾರೆ.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ಹಾಗೂ ಪಕ್ಷದ ಪ್ರಮುಖರು ಹಾಜರಿರುವರು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಂಜುನಾಥ್ ಕುಮಾರ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.