ಮಡಿಕೇರಿ, ಆ. 27: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿ, ರಾಷ್ಟೀಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶÀ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸದ್ಭ್ಬಾವನಾ ದಿನಾಚರಣೆಯನ್ನು ನಡೆಸಲಾಯಿತು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆÀ ಪ್ರೊ ಚಿತ್ರಾ ವೈ ವಹಿಸಿಕೊಂಡು ವಿದ್ಯಾರ್ಥಿಗಳು ಯಾವದೇ ಭೇದಭಾವವಿಲ್ಲದೆ ಸದ್ಭಾವನೆಯನ್ನು ಇಟ್ಟುಕೊಳ್ಳಬೇಕೆಂದು ವಿವರಿಸಿದರು. ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯ ಪ್ರಮಾಣ ವಚನವನ್ನು ಕಾಲೇಜಿನ ಪ್ರಾಧ್ಯಾಪಕ ಪ್ರೊ. ಶಶಿಧರ್ ಬೋಧಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ದಯಾನಂದ ತಮ್ಮ ಉಪನ್ಯಾಸದಲ್ಲಿ ನಾವೆಲ್ಲರೂ ಭಾರತಾಂಭೆಯ ಮಕ್ಕಳು, ನಾವೆಲ್ಲರೂ ಒಂದೇ ಎಂಬ ಐಕ್ಯತಾ ಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ವೀರಾಜಪೇಟೆ: ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕದ ವತಿಯಿಂದ ಸದ್ಭ್ಬಾವನಾ ದಿನಾಚರಣೆ ಆಚರಿಸಲಾಯಿತು. ಭಾರತದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಅವರನ್ನು ಸ್ಮರಿಸಲಾಯಿತು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಹೆಚ್.ಆರ್. ಅರ್ಜುನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಪಾ. ರೋಸಿರವಿಕುಮಾರ್ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭ ಸಂತ ಅನ್ನಮ್ಮ ಪದವಿ ಕಾಲೇಜಿನ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರೂ ಉಪಸ್ಥಿತರಿದ್ದರು.

ಮಡಿಕೇರಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸದ್ಭ್ಬಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧ-ಭಾವವಿಲ್ಲದೆ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯನಿರ್ವಹಿಸುತ್ತೇವೆಂದು ಪ್ರತಿಜ್ಞೆ ಕೈಗೊಳ್ಳಲಾಯಿತು.

ಎನ್‍ಎಸ್‍ಎಸ್ ಅಧಿಕಾರಿ ನಿರ್ಮಲ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲ ಜವರಪ್ಪ ಡಿ.ಜೆ., ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸದ್ಭಾವನಾ ದಿನ ಆಚರಿಸಲಾಯಿತು. ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಶಾಕೀರ್ ಮಾತನಾಡಿ ಧರ್ಮದ ಆಧಾರದ ಮೇಲೆ ನಡೆಯುವ ವಿಭಜನೆ ಮಾನವ ಸಂಕುಲವನ್ನು ಸರ್ವನಾಶ ಮಾಡುತ್ತದೆ ಎಂದರು.

ಕಾವೇರಿ ಸ್ನಾತಕೋತ್ತರ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಬೆನಡಿಕ್ಟ್ ಸಾಲ್ಡಾನ ಸರ್ವ ಧರ್ಮದ ಕುರಿತು ಉಪನ್ಯಾಸ ನೀಡಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಎನ್‍ಎಸ್‍ಎಸ್ ಅಧಿಕಾರಿ ಎಂ.ಎನ್. ವನಿತ್‍ಕುಮಾರ್ ಇದ್ದರು.ಮೂರ್ನಾಡು: ಮೂರ್ನಾಡು ಪದವಿಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನವನ್ನು ಆಚರಿಸಲಾಯಿತು. ದಿನದ ಮಹತ್ವವನ್ನು ರಸಾಯನ ಶಾಸ್ತ್ರದ ಉಪನ್ಯಾಸಕ ಪಿ.ಕೆ. ರವಿಶಂಕರ್ ವಿದ್ಯಾರ್ಥಿಗಳಿಗೆ ವಿವರಿಸಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಮಡಿಕೇರಿ: ಮದೆ ಮಹೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನವನ್ನು ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗುಲಾಬಿ ಜನಾರ್ಧನ್ ವಹಿಸಿದ್ದು, ಸದ್ಭಾವನಾ ದಿನದ ಆಚರಣೆಯ ಮಹತ್ವವನ್ನು ತಿಳಿಸಿ ಸದ್ಭಾವನಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ದಿನದ ಮಹತ್ವದ ಕುರಿತು ಇತಿಹಾಸ ಉಪನ್ಯಾಸಕ ಪರಶುರಾಮಪ್ಪ ಅವರು ವಿವರಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ವಾಣಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕಾಲೇಜು ನಾಯಕಿ ಧನ್ಯಶ್ರೀ ವಂದಿಸಿದರು.