ಕೂಡಿಗೆ, ಆ. 27: ಹೆಬ್ಬಾಲೆಯ ಸೀಕ್ರೇಟ್ ಹಾರ್ಟ್ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೂಡಿಗೆ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ನಡೆಯಿತು.
ಕ್ರೀಡಾಕೂಟಕ್ಕೆ ನಿವೃತ್ತ ದೈಹಿಕ ಶಿಕ್ಷಕ ಕೃಷ್ಣಮೂರ್ತಿ ಅವರು ಚಾಲನೆ ನೀಡಿ, ವಿದ್ಯಾರ್ಥಿಗಳು ಪ್ರಾಥಮಿಕ ಹಂತದಲ್ಲಿಯೇ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಕ್ರೀಡಾಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾಭಿವೃದ್ಧಿ ಉಪಸಮಿತಿಯ ಪ್ರಕಾಶ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಂಜುನಾಥ್ ವಹಿಸಿದ್ದರು.
ಮುಖ್ಯಅತಿಥಿಗಳಾಗಿ ಸೋಮವಾರಪೇಟೆ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕರುಂಬಯ್ಯ, ಸೋಮವಾರಪೇಟೆ ತಾಲೂಕು ಶಿಕ್ಷಕ ಸಂಘದ ಕಾರ್ಯದರ್ಶಿ ಬಸವರಾಜು, ಸಿಆರ್‍ಪಿ ಗಿರೀಶ್, ದೈಹಿಕ ಶಿಕ್ಷಕ ಗಣೇಶ್, ಆನಂದ್, ನೀಲಪ್ಪ, ಚೌಡಮ್ಮ, ಚೇತನ್, ಹೆಬ್ಬಾಲೆ ಸೀಕ್ರೇಟ್ ಹಾರ್ಟ್ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಮೊದಲಾದವರು ಇದ್ದರು.