ಸುಂಟಿಕೊಪ್ಪ, ಆ. 28: ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ಪಿ.ಕೆ. ಜಗದೀಶ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಬೆಂಗಳೂರಿನಲ್ಲಿ 50ನೇ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ಆಯ್ಕೆ ನಡೆಸಲಾಗಿದ್ದು, ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಪಿ.ಕೆ. ಜಗದೀಶ್ ಆಯ್ಕೆಗೊಂಡಿದ್ದಾರೆ. ಕಳೆದ 4 ಅವಧಿಯಿಂದ ರಾಜ್ಯ ಸಮಿತಿಯಲ್ಲಿ ಜಿಲ್ಲಾ ಪ್ರತಿನಿಧಿಯಾಗಿ ಪ್ರತಿನಿಧಿಸುತ್ತಿದ್ದಾರೆ.