ಕೂಡಿಗೆ, ಆ. 28: ವಿದ್ಯಾರ್ಥಿ ಗಳು ಕ್ರೀಡೆಯಲ್ಲಿ ತೊಡಗುವದರಿಂದ ಪ್ರಬಲ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಕ್ರೀಡಾರ್ಥಿ ಗಳಲ್ಲಿ ರೋಗಗಳ ಬಾಧೆ ಕಡಿಮೆ ಯಾಗುತ್ತದೆ ಎಂದು ಸೋಮವಾರ ಪೇಟೆ ತಾಲೂಕು ಶಿಕ್ಷಣಾಧಿಕಾರಿ ನಾಗರಾಜಯ್ಯ ಹೇಳಿದರು.

ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ 2019-20ನೇ ಸಾಲಿನ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯು ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡುವದರ ಜೊತೆಗೆ ಮನೋಬಲ ವನ್ನು ಹೆಚ್ಚಿಸುತ್ತದೆ. ಜೊತೆಗೆ ತನ್ನದೇ ಆದ ಇಚ್ಚಾಶಕ್ತಿಯನ್ನು ಮೈಗೂಡಿಸಿ ಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಕ್ರೀಡಾಕೂಟದ ಧ್ವಜಾರೋಹಣ ನೆರೆವೇರಿಸಿ ಮಾತನಾಡಿದ ಜಿ.ಪಂ ಸದಸ್ಯೆ ಕೆ.ಆರ್.ಮಂಜುಳಾ, ದೈಹಿಕ ಮತ್ತು ಮಾನಸಿಕ ನೆಮ್ಮದಿಗೆ ಕ್ರೀಡೆ ಸಹಕಾರಿಯಾಗುತ್ತದೆ ಮತ್ತು ಶಕ್ತಿ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ ಎಂದರು.

ಕ್ರೀಡಾಜ್ಯೋತಿ ಬೆಳಗಿಸಿದ ತಾ.ಪಂ. ಸದಸ್ಯ ಗಣೇಶ್ ಮಾತನಾಡಿ, ಕ್ರೀಡೆಯಲ್ಲಿ ಸಕ್ರಿಯ ವಾಗಿ ಪಾಲ್ಗೊಳ್ಳುವದರಿಂದ ಬುದ್ಧಿ ಶಕ್ತಿ ವೃದ್ಧಿಯಾಗುತ್ತದೆ ಎಂದರು.

ಕ್ರೀಡಾಕೂಟದಲ್ಲಿ ಹತ್ತು ಶಾಲೆಗಳಿಂದ ಆಗಮಿಸಿದ ಬಾಲಕ ಬಾಲಕಿಯರು ಪಾಲ್ಗೊಂಡಿದ್ದು, ಕಬಡ್ಡಿ, ಬಾಲಕಿಯರ ಥ್ರೋಬಾಲ್, ಬಾಲಕರ ವಾಲಿಬಾಲ್ ಕ್ರೀಡೆಗಳನ್ನು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕಾಶ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೂಡಿಗೆ ಶಿಕ್ಷಕರ ತರಬೇತಿ ಕೇಂದ್ರದ ಹಿರಿಯ ಉಪನ್ಯಾಸಕಿ ನಳಿನಾಕ್ಷಿ, ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವ ಪಲ್ಲೇದ್, ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜು ಉಪಾಧ್ಯಕ್ಷ ಕೆ.ಕೆ. ನಾಗರಾಜ್ ಶೆಟ್ಟಿ, ಪೆÇೀಷಕ ಪರಿಷತ್ತಿನ ಅಧ್ಯಕ್ಷ ಹರೀಶ್, ನಿರ್ದೇಶಕ ರವಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಹಾಗೂ ವಿವಿಧ ಶಾಲೆಗಳಿಂದ ಆಗಮಿಸಿದ್ದ ದೈಹಿಕ ಶಿಕ್ಷಕರು ಭಾಗವಹಿದ್ದರು.