ಮಡಿಕೇರಿ, ಆ. 28: ಶಾಲಾ ಪರಿಸರ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಹಾಗೂ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ತಾ. 29 ರಂದು (ಇಂದು) ಮಧ್ಯಾಹ್ನ 3 ಗಂಟೆಗೆ ನಗರದ ಸಂತ ಮೈಕಲ್ಲರ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ಜನಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈಗಾಗಲೇ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ‘ಪರಿಸರ ಸ್ನೇಹಿ’ ಗಣೇಶೋತ್ಸವ ಆಚರಣೆ ಕುರಿತಂತೆ ಜನಜಾಗೃತಿ ನಡೆಸಲಾಗುತ್ತಿದ್ದು, ಇದಕ್ಕೆ ಪೂರಕವಾಗಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಶಾಲೆಗಳಲ್ಲಿ ಅನುಷ್ಠಾನಗೊಳಿಸಲು ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೊ ಹೇಳಿದ್ದಾರೆ.