ಮಡಿಕೇರಿ, ಆ. 28: ಎಡಪಾಲ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ 21 ವರ್ಷಗಳ ಕಾಲ ಶಿಕ್ಷಕಿ ಯಾಗಿ ಇದೀಗ ಕೋಕೇರಿ ಶಾಲೆಗೆ ವರ್ಗಾವಣೆಯಾದ ಕೆ.ಎಸ್. ಜರೀನಾ ಅವರಿಗೆ ಎಡಪಾಲ ಶಾಲಾ ಎಸ್.ಡಿ.ಎಂ.ಸಿ. ಹಾಗೂ ಎಡಪಾಲ ಹಳೆ ವಿದ್ಯಾರ್ಥಿ ಸಂಘದ ಪರವಾಗಿ ಬೀಳ್ಕೊಡುಗೆ ಸಮಾರಂಭ ಎಡಪಾಲ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಇಲ್ಲಿನ ಪ್ರಾಥಮಿಕ ಶಾಲೆಯಲ್ಲಿ 21 ವರ್ಷಗಳ ಕಾಲ ಸುದೀರ್ಘ ಕಾಲ ಶಿಕ್ಷಕಿಯಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ದ್ದರು ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನಲ್ಲಚಂಡ ಕಿರಣ್ ಕಾರ್ಯಪ್ಪ, ಶಾಲೆಯ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರಿಂದ ಶಾಲೆಯಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಆಹವಾಲುಗಳನ್ನು ಸ್ವೀಕರಿಸಲಾಗಿದೆ. ಈ ಶಾಲೆಗೆ ಬೇಕಾದ ಎಲ್ಲಾ ರೀತಿಯ ಅನುದಾನ ವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕಿ ಕೆ.ಎಸ್. ಜರೀನ, ಕಳೆದ 21 ವರ್ಷಗಳ ಕಾಲ ಎಡಪಾಲ ಶಾಲೆ ಯಲ್ಲಿ ಸೇವೆ ಸಲ್ಲಿಸಿದ ಬಗ್ಗೆ ಸ್ಮರಿಸಿ ದರು. ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಎಡಪಾಲ ಶಾಲಾ ಮುಖ್ಯೋಪಾಧ್ಯಾಯ ಕೆ.ಎ. ಉಮ್ಮರ್ ಮಾಸ್ಟರ್ ಮಾತನಾಡಿದರು.
ವೇದಿಕೆಯಲ್ಲಿ ಜಿ. ಪಂಚಾಯಿತಿ ಸದಸ್ಯೆ ಉಮಾ ಪ್ರಭು, ಗ್ರಾಮ ಪಂಚಾಯಿತಿ ಸದಸ್ಯರಾದ ಅನಂತ್ ಕುಮಾರ್, ಎ.ಎಂ. ಉಮ್ಮರ್, ಭಾರತಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಲತೀಫ್, ನಿರ್ದೇಶಕ ರಶೀದ್ ಇನ್ನಿತರರು ಇದ್ದರು.
ನಾಪೋಕ್ಲು, ಆ. 28: ಇಲ್ಲಿಗೆ ಸಮೀಪದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಪಾಲ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೇವೆಸಲ್ಲಿಸಿದ ಶಿಕ್ಷಕಿ ಜರೀನ ಅವರಿಗೆ ಬೀಳ್ಕೊಡುಗೆ ನಡೆಯಿತು.
ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು ಗ್ರಾಮ ಪಂಚಾಯಿತಿ ಸದಸ್ಯ ಅನಂತಕುಮಾರ್, ಭಾರತಿ, ಉಮ್ಮರ್, ನಿವೃತ್ತ ಶಿಕ್ಷಕ ಉಮ್ಮರ್ ಮಾಸ್ಟರ್ ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಶಿಕ್ಷಕ ವೃಂದ ಪಾಲ್ಗೊಂಡಿದ್ದರು.
ಇದೇ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅವರನ್ನು ಗೌರವಿಸ ಲಾಯಿತು.ಸುಂಟಿಕೊಪ್ಪ, ಆ. 28: ಕೆದಕಲ್ ಪ್ರಾಥಮಿಕ ಶಾಲೆಯಲ್ಲಿ 24 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕಿಗೆ ಗ್ರಾಮ ಪಂಚಾಯಿತಿ ಹಾಗೂ ಶಾಲೆಯ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಕೆದಕಲ್ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಕಳೆದ 24 ವರ್ಷಗಳಿಂದ ಪ್ರಾಥಮಿಕ ಶಾಲೆಯಲ್ಲಿ ವನಜಾಕ್ಷಿ ಎಂಬವರು ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಅವರು ಕೂಡಿಗೆಯ ಫಾರಂ ಸರಕಾರಿ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡಿದ್ದು, ಅವರ ಸೇವೆಯನ್ನು ಮನ್ನಿಸಿ ಕೆದಕಲ್ ಪಂಚಾಯಿತಿ ಸದಸ್ಯರಾದ ಬಿ.ಎಂ. ವೆಂಕಪ್ಪ ಕೋಟ್ಯಾನ್, ಪಂಚಾಯಿತಿ ಪಿಡಿಓ ವೀಣಾ, ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮೀನಾಕ್ಷಿ ಅವರು ಗೌರವಿಸಿದರು.
ಈ ಸಂದರ್ಭ ಸಿಆರ್ಪಿಗಳಾದ ಪುರುಷೋತ್ತಮ್, ಸತ್ಯನಾರಾಯಣ, ಆರೋಗ್ಯ ಸಹಾಯಕಿ ಶೇಷಮ್ಮ, ಅಂಗನವಾಡಿ ಕಾರ್ಯಕರ್ತೆ ಮಂಜುಳ, ಆಶಾ ಕಾರ್ಯಕರ್ತೆ ನಿರ್ಮಲಾ, ಬಿಲ್ಕಲೆಕ್ಟರ್ ರಾಮಚಂದ್ರ, ಪಂಚಾಯಿತಿ ಸಿಬ್ಬಂದಿ ಬಾಲಚಂದ್ರ ಮತ್ತಿತರರು ಇದ್ದರು.