ಸೋಮವಾರಪೇಟೆ, ಆ. 28: ಇಲ್ಲಿನ ಸಂತ ಜೋಸೆಫರ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ವ್ಯವಸ್ಥಾಪಕ ಫಾದರ್ ಎಂ. ರಾಯಪ್ಪ ಉದ್ಘಾಟಿಸಿ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಪ್ರತಿಭೆ ಇರುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದರು.

ಪ್ರಾಂಶುಪಾಲ ಫಾದರ್ ಅಂತೋಣಿರಾಜ್, ಪದವಿ ಕಾಲೇಜಿನ ಪ್ರಾಂಶುಪಾಲ ಎ. ಥಾಮಸ್ ಮತ್ತಿತರರು ಇದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.