ಮಡಿಕೇರಿ, ಆ.28: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಂಟಿಯಾಗಿ ಇಕೋ ಕ್ಲಬ್ ವತಿಯಿಂದ ಮಂಗಳವಾರ (ಆ.27 ರಂದು) ಗೌರಿ - ಗಣೇಶ ಹಬ್ಬಕ್ಕೆ ಪೂರ್ವಭಾವಿಯಾಗಿ ‘ಪರಿಸರ ಸ್ನೇಹಿ’ ಹಸಿರು ಗಣೇಶ ಉತ್ಸವ ಆಚರಣೆ ಕುರಿತಂತೆ ಪರಿಸರ ಜಾಗೃತಿ ಅಭಿಯಾನ ನಡೆಸಲಾಯಿತು.

‘ಹಸಿರೆಡೆಗೆ ನಮ್ಮ ನಡೆ-ಹಸಿರು ಯಾತ್ರೆ ಅಭಿಯಾನ’ ಎಂಬ ಜಿಲ್ಲಾ ಮಡಿಕೇರಿ, ಆ.28: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಂಟಿಯಾಗಿ ಇಕೋ ಕ್ಲಬ್ ವತಿಯಿಂದ ಮಂಗಳವಾರ (ಆ.27 ರಂದು) ಗೌರಿ - ಗಣೇಶ ಹಬ್ಬಕ್ಕೆ ಪೂರ್ವಭಾವಿಯಾಗಿ ‘ಪರಿಸರ ಸ್ನೇಹಿ’ ಹಸಿರು ಗಣೇಶ ಉತ್ಸವ ಆಚರಣೆ ಕುರಿತಂತೆ ಪರಿಸರ ಜಾಗೃತಿ ಅಭಿಯಾನ ನಡೆಸಲಾಯಿತು.

‘ಹಸಿರೆಡೆಗೆ ನಮ್ಮ ನಡೆ-ಹಸಿರು ಯಾತ್ರೆ ಅಭಿಯಾನ’ ಎಂಬ ಜಿಲ್ಲಾ ಶಾಲಾ ಪ್ರಾರ್ಥನೆಯ ವೇಳೆಯಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಅಗತ್ಯತೆ ಕುರಿತು ಶಿಕ್ಷಕರು ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಸಾಯನಿಕ ಬಣ್ಣದ ಗಣೇಶ ವಿಗ್ರಹಗಳನ್ನು ತಯಾರಿಸಿ ಜಲಮೂಲ ಗಳಲ್ಲಿ ವಿಸರ್ಜಿಸುವ ದರಿಂದ ಜಲಮಾಲಿನ್ಯ ಉಂಟಾಗಿ ಜಲಚರ ಗಳು ಮತ್ತು ಪರಿಸರಕ್ಕೆ ತೀವ್ರ ಧಕ್ಕೆಯುಂಟಾ ಗುವ ಬಗ್ಗೆ ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರೇಮ ಕುಮಾರ್ ತಿಳಿಸಿದರು.

ಮಣ್ಣಿನ ಗಣೇಶ ವಿಗ್ರಹ ತಯಾರಿಕೆ ಮತ್ತು ಬಳಕೆ ಕುರಿತು ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಪ್ರೌಢಶಾಲಾ ಮುಖ್ಯ ಶಿಕ್ಷಕ ವೆಂಕಟೇಶ್ ನಾಯ್ಕ್ ಮಾತನಾಡಿ, ವಿದ್ಯಾರ್ಥಿಗಳು ಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಎಂದರು.

ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಂದರಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ಇಂತಹ ಪರಿಸರ ಸ್ನೇಹಿ ಚಟುವಟಿಕೆಗಳು ಹಾಗೂ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಪ್ರಾಥಮಿಕ ಶಾಲೆಯ ಶಿಕ್ಷಕ ಎಂ.ಟಿ.ಪೂವಯ್ಯ, ಮಣ್ಣಿನ ಗಣೇಶಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಜಲಮೂಲಗಳ ಸಂರಕ್ಷಣೆಗೆ ಕಟಿಬದ್ಧರಾಗಬೇಕು ಎಂದರು. ಶಾಲೆಯ ಹಳೆ ವಿದ್ಯಾರ್ಥಿ ಕೆ.ಟಿ. ಪೆಮ್ಮಯ್ಯ, ಶಿಕ್ಷಕರಾದ ಕೆ.ಯಶೋಧ, ಕೆ.ಎ.ಅಮೀನಾ, ಶೋಭಾ ಇತರರು ಇದ್ದರು.ನಂತರ ನಡೆದ ಜಾಗೃತಿ ಆಂದೋಲನದಲ್ಲಿ ವಿದ್ಯಾರ್ಥಿಗಳು ಮಣ್ಣಿನ ಗಣೇಶ ವಿಗ್ರಹವನ್ನು ಪ್ರದರ್ಶನಕ್ಕಿಟ್ಟು ಪರಿಸರ ಘೋಷಣೆಗಳ ಮೂಲಕ ಪರಿಸರ ಜಾಗೃತಿ ಮೂಡಿಸಿದರು.-ಟಿ.ಜಿ.ಪ್ರೇಮಕುಮಾರ್